Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:34 - ಕನ್ನಡ ಸತ್ಯವೇದವು J.V. (BSI)

34 ಆ ರಾತ್ರಿಯಲ್ಲಿ ಒಂದೇ ಮಂಚದ ಮೇಲೆ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ಮಿಯಾ ತುಮ್ಕಾ ಸಾಂಗ್ತಾ, ತ್ಯಾ ದಿಸ್ ರಾಚ್ಚೆ, ಎಕ್ ಹಾತ್ರಾನಾತ್ ನಿಜಲ್ಲ್ಯಾ ದೊಗ್ಯಾ ಜಾನಾನಿತ್ಲ್ಯಾ ಎಕ್ಲ್ಯಾಕ್ ಘೆವ್ನ್ ಜಾವ್ನ್ ಹೊತಾ. ಅನಿ ಅನಿ ಎಕ್ಲ್ಯಾಕ್ ಸೊಡುನ್ ಜಾವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:34
18 ತಿಳಿವುಗಳ ಹೋಲಿಕೆ  

ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.


ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.


ನೀವಂತು ನೋಡಿಕೊಳ್ಳಿರಿ; ನಿಮಗೆ ಎಲ್ಲವನ್ನೂ ಮುಂದಾಗಿ ಹೇಳಿದ್ದೇನೆ.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.


ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ.


ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು.


ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.


ಆದರೆ ಪೇತ್ರನು ಆತನಿಗೆ - ಎಲ್ಲರೂ ದಿಗಿಲುಪಟ್ಟು ಹಿಂಜರಿದರೂ ನಾನು ಹಿಂಜರಿಯುವದಿಲ್ಲ ಎಂದು ಹೇಳಲು


ತನ್ನ ಪ್ರಾಣವನ್ನು ದೊರಕಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಪ್ರಾಣವನ್ನು ಕಳಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.


ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು