Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:19 - ಕನ್ನಡ ಸತ್ಯವೇದವು J.V. (BSI)

19 ಯೇಸು ಅವನಿಗೆ - ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಜೆಜುನ್ ತೆಕಾ, “ಮಾಕಾ ತಿಯಾ ಬರೊ ಮನುನ್ ಕಶ್ಯಾಕ್ ಮನ್ತೆ? ದೆವಾಕ್ ಎಕ್ಲ್ಯಾಕ್ ಸೊಡುನ್ ಕೊನ್ಬಿ ಬರೊ ನ್ಹಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:19
10 ತಿಳಿವುಗಳ ಹೋಲಿಕೆ  

ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವದು ಹೇಗೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವದು ಸಾಧ್ಯವೋ?


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ


ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು