Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:2 - ಕನ್ನಡ ಸತ್ಯವೇದವು J.V. (BSI)

2 ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಎಕ್ ಮೊಟ್ಯಾ ಗಾಂವಾತ್ ಎಕ್ ನ್ಯಾಯ್ ನಿರ್‍ನಯ್‍ ಕರ್‍ತಲೊ ಮಾನುಸ್ ಹೊತ್ತೊ, ತೆಕಾ ದೆವಾಚೆ ಭಿಂಯೆ ನತ್ತೆ, ಅನಿ ಮಾನ್ಸಾಕ್ನಿ ತರ್ ತೊ ಮೆಜಿಚ್‍ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:2
14 ತಿಳಿವುಗಳ ಹೋಲಿಕೆ  

ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು; ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ರಾಜಮಾರ್ಗಗಳು ಹಾಳಾಗಿವೆ, ದಾರಿಗರು ಇಲ್ಲವೇ ಇಲ್ಲ; [ಶತ್ರುವು] ಒಪ್ಪಂದವನ್ನು ಮೀರಿದ್ದಾನೆ, ಊರಿನವರನ್ನು ತಿರಸ್ಕರಿಸಿದ್ದಾನೆ, ಮನುಷ್ಯರನ್ನು ಗಣನೆಗೆ ತಾರನು.


ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - ನ್ಯಾಯ ವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು ಎಂದು ಹೇಳಿಕೊಳ್ಳುತ್ತಿದ್ದಳು.


ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು