Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:32 - ಕನ್ನಡ ಸತ್ಯವೇದವು J.V. (BSI)

32 ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಇವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆತನನ್ನು ಪರಕೀಯರ ಕೈಗೊಪ್ಪಿಸಲಾಗುವುದು; ಅವರು, ಅವನನ್ನು ಪರಿಹಾಸ್ಯ ಮಾಡುವರು, ಅಪಮಾನಪಡಿಸುವರು, ಉಗಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆಕಾ ಥೈ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಧರುನ್ ದಿವ್ನ್ ಹೊತಾ. ತೆನಿ ತೆಕಾ ಎಡ್ಸಡ್ತಾತ್, ತೆಚಿ ಮರ್‍ಯಾದ್ ಕಾಡ್ತ್ಯಾತ್, ಅನಿ ತೆಕಾ ಥುಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:32
26 ತಿಳಿವುಗಳ ಹೋಲಿಕೆ  

ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.


ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ -


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವದನ್ನು ನೋಡಿ ಅನೇಕರು ಹೇಗೆ ಅವನಿಂದ ಬೆದರಿ ಬಿದ್ದರೋ


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಪಿಲಾತನು - ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನವೂ ಮಹಾಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿದ್ದಕ್ಕೆ


ಅವರು ಅವನಿಗೆ - ಇವನು ದುಷ್ಕರ್ಮಿಯಲ್ಲದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿದ್ದಿಲ್ಲವೆಂದು ಉತ್ತರ ಕೊಟ್ಟರು.


ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.


ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.


ಅಲ್ಲಿ ಕೂಡಿದ್ದವರೆಲ್ಲರು ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದುಕೊಂಡು ಹೋಗಿ -


ಆತನನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.


ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.


ಉಳಿದವರು ಅವನ ಆಳುಗಳನ್ನು ಹಿಡಿದು ಬೈದು ಕೊಂದುಹಾಕಿದರು.


ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.


ಇದರಿಂದ ಯೇಸು ತಾನು ಎಂಥಾ ಸಾವು ಸಾಯುವೆನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು