Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:34 - ಕನ್ನಡ ಸತ್ಯವೇದವು J.V. (BSI)

34 ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಿಕೊಳ್ಳಲಿಲ್ಲ. ಈ ಹೇಳಿಕೆ ಅವರಿಗೆ ಒಗಟಾಗಿತ್ತು. ಎಂದೇ ಯೇಸುವಿನ ಮಾತುಗಳು ಅವರಿಗೆ ಅರ್ಥವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಖರೆ ಶಿಸಾಕ್ನಿ ತೆನಿ ಸಾಂಗಟಲ್ಲ್ಯಾ ಎಕ್‍ಬಿ ಗೊಸ್ಟಿಚೊ ಅರ್ತ್‍ ಹೊವ್ಕ್ ನಾ. ತ್ಯಾ ಗೊಸ್ಟಿಯಾಂಚೊ ಅರ್ತ್‍ ತೆಂಚೆಕ್ನಾ ನಿಪ್ವುನ್ ಥವಲ್ಲೊ ಹೊತ್ತೊ, ಅನಿ ತೆಂಕಾ ಜೆಜು ಖಲ್ಯಾ ವಿಶಯಾತ್ ಬೊಲುಲಾ ಮನುನ್ ಕಳುಕುಚ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:34
9 ತಿಳಿವುಗಳ ಹೋಲಿಕೆ  

ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.


ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.


ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು.


ಈ ಉಪಮಾನವನ್ನು ಯೇಸು ಅವರಿಗೆ ಹೇಳಿದನು; ಆದರೂ ಆತನ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.


ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು