Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:12 - ಕನ್ನಡ ಸತ್ಯವೇದವು J.V. (BSI)

12 ಅದೇನಂದರೆ - ಶ್ರೀಮಂತನಾದ ಒಬ್ಬಾನೊಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬರಬೇಕೆಂದು ದೂರದೇಶಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮನುನ್ ತೆನಿ ತೆಂಕಾ ಎಕ್ ಮೊಟ್ಯಾ ಗೌರವಾಚ್ಯಾ ಘರಾನ್ಯಾಚೊ ಮಾನುಸ್ ಹೊತ್ತೊ, ತೊ ಅಪ್ನಿ ಘರಾತ್ ಯೆತಾನಾ ಎಕ್ ರಾಜಾ ಹೊವ್ನ್ ಯೆವ್ಚೆ ಮನುನ್ ಯೆವ್ಜುನ್ ಧುರ್‍ಲ್ಯಾ ದೆಸಾಕ್ ಜಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:12
18 ತಿಳಿವುಗಳ ಹೋಲಿಕೆ  

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಯಾಕಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವದು ಅವಶ್ಯ.


ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು