Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:15 - ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಅವನು ರಾಜ್ಯಾಧಿಕಾರವನ್ನು ಪಡಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳುಕೊಳ್ಳುವದಕ್ಕಾಗಿ ಅವರನ್ನು ತನ್ನ ಬಳಿಗೆ ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ತೊ ಮಾನುಸ್ ಅಪ್ನಿ ರಾಜಾ ಹೊಲೊ! ಅನಿ ಫಾಟಿ ಪರ್ತುನ್ ಯೆಲೊ. ಎಗ್ದಮ್ ತೆನಿ ಅಪ್ನಾಚ್ಯಾ ಆಳಾಕ್ನಿ ತಾಬೊಡ್ತೊಬ್ ಮಾಜ್ಯಾ ಇದ್ರಾಕ್ ಯೆವ್ಚೆ ಮನುನ್ ಹುಕುಮ್ ದಿಲ್ಯಾನ್. ತೆನಿ ಕವ್ಡೆ ಖಮ್ವುಲ್ಯಾನಾತ್ ಬಗುವಾ ಮನುನ್ ತೆನಿ ತೆಂಕಾ ಬಲ್ವುಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:15
9 ತಿಳಿವುಗಳ ಹೋಲಿಕೆ  

ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.


ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಮೊದಲನೆಯವನು ಆತನ ಮುಂದೆ ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಹತ್ತು ಮೊಹರಿಗಳು ಸಂಪಾದನೆಯಾದವು ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು