Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:21 - ಕನ್ನಡ ಸತ್ಯವೇದವು J.V. (BSI)

21 ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಮಾಕಾ ತುಜೆ ಭಿಂಯೆ ಕರ್‍ಲೆ, ಕಶ್ಯಾಕ್ ಮಟ್ಲ್ಯಾರ್ ತಿಯಾ ಲೈ ಕಟೊರ್ ಮಾನುಸ್, ತುಜೆ ನ್ಹಯ್ ಮನುನ್ ಹೊತ್ತೆ ಸೈತ್ ತಿಯಾ ಕಾಡುನ್ ಘೆತೆ, ಅನಿ ಪೆರು ನಸಲ್ಲ್ಯಾಕ್ಡೆ ತಿಯಾ ಕಾತರ್‍ತೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:21
16 ತಿಳಿವುಗಳ ಹೋಲಿಕೆ  

ಎಲ್ಲರಿಗೆ ನ್ಯಾಯತೀರಿಸುವದಕ್ಕೂ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನ್ನ ಮೇಲೆ ಹೇಳಿದ ಎಲ್ಲಾ ಕಠಿನವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವದಕ್ಕೂ ಬಂದನು ಎಂಬದಾಗಿ ಪ್ರವಾದಿಸಿದನು.


ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಯಾಕಂದರೆ ಯಾವನಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ.


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು