Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:26 - ಕನ್ನಡ ಸತ್ಯವೇದವು J.V. (BSI)

26 ಅದಕ್ಕವನು - ಇದ್ದವರಿಗೆಲ್ಲಾ ಕೊಡಲ್ಪಡುವದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ನಾನು ನಿಮಗೆ ಹೇಳುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ರಾಜ, ‘ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಅರಸನು, ‘ತನ್ನಲ್ಲಿರುವುದನ್ನು ಉಪಯೋಗಿಸುವವನು ಹೆಚ್ಚು ಪಡೆಯುವನು. ಆದರೆ ತನ್ನಲ್ಲಿರುವುದನ್ನು ಉಪಯೋಗಿಸದವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೆನಿ “ಮಿಯಾ ತುಮ್ಕಾ ಸಾಂಗ್ತಾ” ಜೆ ಕೊನಾಕ್ಡೆ ಉಲ್ಲೆಸೆ ಹಾಯ್, ತೆಕಾ,ಅನಿ ಉಲ್ಲೆ ಜಾಸ್ತಿಚೆ ದಿವ್ನ್ ಹೊತಾ, ಅನಿ ಕೊನಾಕ್ಡೆ ಕಾಯ್ಬಿ ನಾ, ತೆಂಚೆಕ್ನಾ ಹೊತ್ತೆಬಿ ಉಲ್ಲೆಸೆ ಕಾಡುನ ಘೆವ್ನ್ ಜಾವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:26
17 ತಿಳಿವುಗಳ ಹೋಲಿಕೆ  

ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಯಾಕಂದರೆ ಇದ್ದವನಿಗೆ ಕೊಡಲ್ಪಡುವದು, ಅವನಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.


ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ಹೇಳಿದನು.


ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.


ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ.


ಆದರೂ ನನ್ನ ಕೃಪೆಯು ಸೌಲನನ್ನು ಬಿಟ್ಟುಹೊದ ಹಾಗೆ ಅವನನ್ನು ಬಿಟ್ಟುಹೋಗುವದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ!


ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ.


ಅವನ ಜೀವಿತದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.


ಅವರು - ದೊರೆಯೇ, ಹತ್ತು ಮೊಹರಿಗಳು ಅವನಲ್ಲಿ ಅವೆಯಲ್ಲಾ ಎಂದು ಅವನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು