Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:9 - ಕನ್ನಡ ಸತ್ಯವೇದವು J.V. (BSI)

9 ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶಿಕನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜುನ್ ತೆಕಾ ಆಜ್ ಹ್ಯಾ ಘರಾತ್ ಸುಟ್ಕಾ ಯೆವ್ನ್ ಪಾವ್ಲಾ, ಅನಿ ಹ್ಯಾ ಮಾನ್ಸಾಕ್ ಬಿ. ಕಶ್ಯಾಕ್ ಮಟ್ಲ್ಯಾರ್, ತೊ ಬಿ ಅಬ್ರಾಹಾಮಾಚ್ಯಾ ಘರಾನ್ಯಾಚೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:9
15 ತಿಳಿವುಗಳ ಹೋಲಿಕೆ  

ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.


ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.


ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನೀನು ನೇವಿುಸಿರುವ ರಕ್ಷಕನನ್ನು ನಾನು ಕಣ್ಣಾರೆ ಕಂಡೆನು.


ಇಗೋ, ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು; ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು ಅಂದನು.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು