ಲೂಕ 2:15 - ಕನ್ನಡ ಸತ್ಯವೇದವು J.V. (BSI)15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು - ನಾವು ಈಗಲೇ ಬೇತ್ಲೆಹೇವಿುಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡೋಣ ನಡೆಯಿರಿ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ತಟ್ಟನೆ ಹೋಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, “ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ದೆವಾಚಿ ದುತಾ ಸರ್‍ಗಾರ್ ಪರ್ತುನ್ ಗೆಲ್ಲ್ಯಾ ತನ್ನಾ ತಿ ಕುರ್‍ಬುರಾ ಎಕಾಮೆಕಾಕ್ನಿ “ಚಲಾ ಬೆತ್ಲೆಹೆಮಾಕ್ ಜಾಂವಾ ಅನಿ ದೆವಾನ್ ಅಮ್ಕಾ ಸಾಂಗಲ್ಲೆ ಬಗುನ್ ಯೆವಾ” ಮನುನ್ ಬೊಲುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |