Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:26 - ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಸರ್ವೆಸ್ವರಾನ್ ಧಾಡ್ತಾ ಮನುನ್ ಗೊಸ್ಟ್ ದಿಲ್ಲ್ಯಾ ಮೆಸ್ಸಿಯಾಕ್ ಬಗಟ್ಲ್ಯಾ ಸಿವಾಯ್ ತಿಯಾ ಮರಿನೆ ಮನುನ್ ಪವಿತ್ರ್ ಆತ್ಮ್ಯಾನ್ ತೆಕಾ ಸಾಂಗಟಲ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:26
20 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.


ಹನೋಕನು ಮರಣವನ್ನು ಅನುಭವಿಸದೆ ಒಯ್ಯಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರಿಗೆ ಮೆಚ್ಚಿಕೆಯಾದವನಾಗಿದ್ದನೆಂದು ಸಾಕ್ಷಿ ಉಂಟು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣ ಹೊಂದುವದಿಲ್ಲವೆಂದು ಅಂದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಆಯಾ ವಚನಗಳ ಅರ್ಥವನ್ನು ಬಿಚ್ಚಿ - ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು ಎದ್ದುಬರುವದು ಅಗತ್ಯವೆಂತಲೂ ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ ಸ್ಥಾಪಿಸಿದನು.


ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡುಕೊಂಡು ಅವನಿಗೆ - ಮೆಸ್ಸೀಯನು ನಮಗೆ ಸಿಕ್ಕಿದನು ಎಂದು ಹೇಳಿ


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.


ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು