ಲೂಕ 2:34 - ಕನ್ನಡ ಸತ್ಯವೇದವು J.V. (BSI)34 ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಸಿಮಾವಾನ್ ತೆಂಕಾ ಆಶಿರ್ವಾದ್ ದಿಲ್ಯಾನ್, ಅನಿ ಮರಿಕ್, ಹ್ಯೊ ಪೊರ್ ದೆವಾನ್ ಧಾಡಲ್ಲಿ ಎಕ್ ವಳಕ್ ಹೊತಾ ಇಸ್ರಾಯೆಲಾತ್ಲ್ಯಾ ಸುಮಾರ್ ಲೊಕಾಕ್ನಿ ಪಡುಕ್ ಅನಿ ಉಟುಕ್, ಕಾರನ್ ಹೊತಾ. ಖರೆ ಸುಮಾರ್ ಲೊಕಾ ಹೆಚ್ಯಾ ವಿಶಯಾತ್ ಹುರ್‍ಪಾಟಿ ಬೊಲ್ತ್ಯಾತ್. ಅಧ್ಯಾಯವನ್ನು ನೋಡಿ |