Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:35 - ಕನ್ನಡ ಸತ್ಯವೇದವು J.V. (BSI)

35 ಇದಲ್ಲದೆ ನಿನ್ನ ಪ್ರಾಣಕ್ಕಂತೂ ಅಲಗು ನಾಟಿದಂತಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 (ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅನಿ ತೊ ತೆಂಚ್ಯಾ ನಿಪುನ್ ಹೊತ್ತ್ಯಾ ಸಗ್ಳ್ಯಾ ಯವ್ಜನ್ಯಾ ಭಾಯ್ರ್ ಉಜ್ಟೊಡಾಕ್ ಹಾನ್ತಾ, ಅನಿ ದುಕ್, ಎಕ್ ಧಾರ್‍ಲ್ಯಾ ಚಾಕ್ವಾ ಸರ್ಕೆ ತುಜ್ಯಾ ಕಾಳ್ಜಾಕ್ ಟೊಪ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:35
13 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ತಂಗಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.


ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು