Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:17 - ಕನ್ನಡ ಸತ್ಯವೇದವು J.V. (BSI)

17 ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ ಮನೇ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಜನರು ಕೇಳಿದ್ದೇ, “ಅಯ್ಯೋ, ಹಾಗೆ ಎಂದಿಗೂ ಸಂಭವಿಸದಿರಲಿ!” ಎಂದರು. ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ; ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.’ ಎಂದು ಪವಿತ್ರಗ್ರಂಥದಲ್ಲಿ ಹೇಳಿರುವುದರ ಅರ್ಥ ಆದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ‘ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಎಂಬ ವಚನದ ಅರ್ಥವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜುನ್ ತೆಂಚೆಕ್ಡೆ ಬಗಟ್ಲ್ಯಾನ್, ಅನಿ ತೆಂಕಾ, ಭಾಂದ್ತಲ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊಚ್, ಸಗ್ಳ್ಯಾನ್ಕಿ ಗರ್ಜೆಚೊ ಗುಂಡೊ ಹೊಲೊ. ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾಚೊ ಅರ್ತ್‍ ಕಾಯ್ ತರ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:17
17 ತಿಳಿವುಗಳ ಹೋಲಿಕೆ  

ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಸ್ವಾವಿುಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು - ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಸ್ವಾವಿು ನುಡಿದ ಮಾತನ್ನು ನೆನಸಿ


ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಎಂದು ಹೇಳಿದನು.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು