Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:24 - ಕನ್ನಡ ಸತ್ಯವೇದವು J.V. (BSI)

24 ಅವರಿಗೆ - ನನಗೆ ಒಂದು ಹಣವನ್ನು ತೋರಿಸಿರಿ. ಇದರಲ್ಲಿ ಯಾರ ತಲೆಯೂ ಮುದ್ರೆಯೂ ಅದೆ ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು. ಅದಕ್ಕೆ ಅವರು, “ರೋಮ್‍ ಚಕ್ರವರ್ತಿಯವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಒಂದು ಬೆಳ್ಳಿ ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಅವರನ್ನು ಕೇಳಲು ಅವರು, “ಕೈಸರನದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಮಾಕಾ ಎಕ್ ಚಾಂದಿಚೊ ಪೈಸೊ ದಾಕ್ವಾ ಹೆಚ್ಯಾ ವರ್‍ತಿ ಹೊತ್ತೆ ಚಿತ್ತರ್, ಅನಿ ನಾವ್ ಕೊನಾಚೆ?” ಮನುನ್ ಇಚಾರ್‍ಲ್ಯಾನ್. ತೆನಿ ಚಕ್ರವರ್ತಿಚೆ ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:24
14 ತಿಳಿವುಗಳ ಹೋಲಿಕೆ  

ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಇಲ್ಲಿರುವ ದೇವಜನರು ನಿಮ್ಮನ್ನು ವಂದಿಸುತ್ತಾರೆ. ಚಕ್ರವರ್ತಿಯ ಅರಮನೆಗೆ ಸೇರಿದವರು ವಿಶೇಷವಾದ ವಂದನೆಗಳನ್ನು ಹೇಳುತ್ತಾರೆ.


ಅಗ್ರಿಪ್ಪನು ಫೆಸ್ತನಿಗೆ - ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಕೈಸರನಿಗೆ ಕಂದಾಯ ಕೊಡುವದು ಸರಿಯೋ ಸರಿಯಲ್ಲವೋ ಎಂದು ಆತನನ್ನು ಕೇಳಿದರು.


ಚಕ್ರವರ್ತಿಯಾದ ತಿಬೇರಿಯನು ಪಟ್ಟಕ್ಕೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಆ ಕಾಲದಲ್ಲಿ ರಾಜ್ಯವೆಲ್ಲಾ ಖಾನೆಷುಮಾರಿ ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಆಳಿಗೆ ದಿನಕ್ಕೆ ಒಂದು ಪಾವಲಿಯಂತೆ ಕೂಲಿ ಗೊತ್ತುಮಾಡಿ ಅವರನ್ನು ದ್ರಾಕ್ಷೇತೋಟಕ್ಕೆ ಕಳುಹಿಸಿದನು.


ಆತನು - ಈ ತಲೆಯೂ ಈ ಮುದ್ರೆಯೂ ಯಾರದು ಎಂದು ಕೇಳಿದ್ದಕ್ಕೆ


ಆತನು ಅವರ ಕುಯುಕ್ತಿಯನ್ನು ಕಂಡುಕೊಂಡು


ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಆಗ ಆತನು - ಈ ತಲೆಯೂ ಮುದ್ರೆಯೂ ಯಾರದು ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು