Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:26 - ಕನ್ನಡ ಸತ್ಯವೇದವು J.V. (BSI)

26 ಆತನ ಮಾತಿನಲ್ಲಿ ಅವರು ಜನರ ಮುಂದೆ ಏನೂ ಹಿಡಿಯಲಾರದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು ಕೊಟ್ಟ ಈ ಉತ್ತರಕ್ಕೆ ಬೆರಗಾಗಿ ಆ ಗೂಢಚಾರರು ಬಾಯಿ ಮುಚ್ಚಿಕೊಂಡರು. ಜನರ ಮುಂದೆ, ಯೇಸುವಿನ ಮಾತುಗಳಲ್ಲಿ ತಪ್ಪು ಕಂಡುಹಿಡಿಯಲು ಅವರಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಥೈ ಲೊಕಾಂಚ್ಯಾ ಇದ್ರಾಕ್ ತೆನಿ ತೆಕಾ ಕಸ್ಲ್ಯಾಬಿ ಚುಕಿತ್ ಸಿರ್‍ಕುಕ್ ಹೊವ್ಕ್ ನಾ, ತಸೆ ಮನುನ್ ಥಂಡ್ ಪಡ್ಲ್ಯಾನಿ. ಅನಿ ಜೆಜುನ್ ಸಾಂಗಲ್ಲೊ ಜಬಾಬ್ ಆಯ್ಕುನ್ ಅಜಾಪ್ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:26
14 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.


ಅನೇಕರು ಬರೀ ಮಾತಿನವರಾಗಿಯೂ ಮೋಸಗಾರರಾಗಿಯೂ ಇದ್ದು ಅಧಿಕಾರಕ್ಕೆ ಒಳಗಾಗದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.


ಆತನು ಸದ್ದುಕಾಯರ ಬಾಯಿ ಕಟ್ಟಿದನೆಂದು ಫರಿಸಾಯರು ಕೇಳಿ ಅಲ್ಲಿಗೆ ಕೂಡಿಬಂದರು.


ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟುಹೋದರು.


ಅವನನ್ನು - ಏನಪ್ಪಾ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.


ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.


ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆತನ ಬಾಯಿಮಾತಿನಲ್ಲಿ ಏನಾದರೂ ಹಿಡಿಯಬೇಕೆಂದು ಆತನನ್ನು ಹೊಂಚಿನೋಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು