Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:36 - ಕನ್ನಡ ಸತ್ಯವೇದವು J.V. (BSI)

36 ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವರು ಅಲ್ಲಿ ದೇವದೂತರಿಗೆ ಸಮಾನರಾಗಿರುವರು; ಅವರು ಎಂದಿಗೂ ಸಾಯುವಂತಿಲ್ಲ; ಪುನರುತ್ಥಾನದ ಫಲ ಆಗಿರುವ ಅವರು ದೇವರ ಮಕ್ಕಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೆನಿ ದೆವಾಚ್ಯಾ ದುತಾಂಚ್ಯಾ ಸರ್ಕೆ ಹೊತ್ಯಾತ್, ಅನಿ ತೆನಿ ಕನ್ನಾಬಿ ಮರಿನ್ಯಾತ್ ತೆನಿ ದೆವಾಚಿ ಪೊರಾ, ಕಶ್ಯಾಕ್ ಮಟ್ಲ್ಯಾರ್, ತೆನಿ ಮರುನ್ ಮರ್‍ನಾತ್ನಾ,ಅನಿ ಪರ್ತುನ್ ಝಿತ್ತೆ ಹೊಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:36
20 ತಿಳಿವುಗಳ ಹೋಲಿಕೆ  

ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ನಿರ್ಲಯಾವಸ್ಥೆಯಲ್ಲಿ ಎದ್ದುಬರುವದು;


ಅವನು ನನಗೆ - ಮಾಡಬೇಡ ನೋಡು; ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವವರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಎಂದು ಹೇಳಿದನು.


ಮರಣವು ಕಡೇ ಶತ್ರುವಾಗಿ ನಿವೃತ್ತಿಯಾಗುವದು.


ಸತ್ತವರು ಬದುಕಿ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.


ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು