Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:38 - ಕನ್ನಡ ಸತ್ಯವೇದವು J.V. (BSI)

38 ಆತನಿಗೆ ಎಲ್ಲರೂ ಜೀವಿಸುವವರೇ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ. ಏಕೆಂದರೆ ಎಲ್ಲರೂ ಅವರಿಗಾಗಿ ಜೀವಿಸುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಝಿತ್ತ್ಯಾಂಚೊ ದೆವ್ ತೊ, ಮರಲ್ಲ್ಯಾಂಚೊ ನ್ಹಯ್ , ತೆಕಾ ಸಗ್ಳೆ ಜಾನಾ ಝಿತ್ತೆಚ್ ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:38
18 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಜೀವ ಸ್ವರೂಪನಾದ ತಂದೆಯು ನನ್ನನ್ನು ಕಳುಹಿಸಿಕೊಟ್ಟಿರಲಾಗಿ ನಾನು ತಂದೆಯಿಂದ ಜೀವಿಸುತ್ತೇನೆ; ಅದರಂತೆ ನನ್ನನ್ನು ತಿನ್ನುವವನೇ ನನ್ನಿಂದ ಜೀವಿಸುವನು.


ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ನಿಮಗೆ ನುಡಿದದ್ದನ್ನು ನೀವು ಓದಲಿಲ್ಲವೇ. ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ ಎಂದು ಹೇಳಿದನು.


ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ; ನೀವು ಹಿಡಿದ ಅಭಿಪ್ರಾಯವು ಬಹು ತಪ್ಪಾಗಿದೆ ಎಂದು ಹೇಳಿದನು.


ಶಾಸ್ತ್ರಿಗಳಲ್ಲಿ ಕೆಲವರು - ಬೋಧಕನೇ, ಚೆನ್ನಾಗಿ ಹೇಳಿದಿ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು