Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:41 - ಕನ್ನಡ ಸತ್ಯವೇದವು J.V. (BSI)

41 ಆಗ ಆತನು - ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಬಳಿಕ ಯೇಸುಸ್ವಾಮಿ, “ಅಭಿಷಿಕ್ತ ಆದ ಲೋಕೋದ್ಧಾರಕನನ್ನು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ, ಅದು ಹೇಗಾದೀತು? ಕೀರ್ತನಾ ಗ್ರಂಥದಲ್ಲಿ ಸ್ವತಃ ದಾವೀದನೇ ಹೀಗೆ ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆಗ ಯೇಸು, “ಕ್ರಿಸ್ತನು ದಾವೀದನ ಮಗನೆಂದು ಜನರು ಏಕೆ ಹೇಳುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಅವರಿಗೆ, “ಕ್ರಿಸ್ತನು ದಾವೀದನ ಪುತ್ರನೆಂದು ಜನರು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೆಜುನ್ ತೆಂಕಾ “ಮೆಸ್ಸಿಯಾ ದಾವಿದಾಚ್ಯಾ ಘರಾನ್ಯಾಚೊ ಕಸೊ ಹೊವ್ಕ್ ಹೊತಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:41
14 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ


ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಆಗ ನನ್ನ ದಾಸನಾದ ದಾವೀದನಿಗೂ ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತುಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.


ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು