Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:44 - ಕನ್ನಡ ಸತ್ಯವೇದವು J.V. (BSI)

44 ದಾವೀದನು ಆತನನ್ನು ಒಡೆಯನೆಂದು ಹೇಳಿದ ಮೇಲೆ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಹೀಗೆ ದಾವೀದನೇ ಆತನನ್ನು, ‘ನನ್ನ ಪ್ರಭು,’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನು ಆಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ದಾವೀದನು ಕ್ರಿಸ್ತನನ್ನು ‘ಪ್ರಭು’ವೆಂದು ಕರೆದ ಮೇಲೆ ಆತನು ಅವನಿಗೆ ಮಗನಾಗಲು ಹೇಗೆ ಸಾಧ್ಯ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ದಾವಿದಾನುಚ್ ತೆಕಾ “ಧನಿ, ಮನುನ್ ಬಲ್ವುಲ್ಯಾರ್, ಮೆಸ್ಸಿಯಾ” ತೆಚ್ಯಾ ಘರಾನ್ಯಾಚೊ ಮನುನ್ ಕಶೆ ಸಾಂಗುಕ್ ಹೊತಾ? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:44
10 ತಿಳಿವುಗಳ ಹೋಲಿಕೆ  

ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು