Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:9 - ಕನ್ನಡ ಸತ್ಯವೇದವು J.V. (BSI)

9 ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ಜೆಜುನ್ ಲೊಕಾಕ್ನಿ ಹಿ ಕಾನಿ ಸಾಂಗಟ್ಲ್ಯಾನ್: ಎಗ್ದಾ ಎಕ್ ಮಾನುಸ್ ಹೊತ್ತೊ, ತೆನಿ ಎಕ್ ದರಾಕ್ಷಿಚೊ ಮಳೊ ಲಾವಲ್ಲ್ಯಾನ್,ಗುತ್ಕ್ಯಾನಿ ದಿಲ್ಯಾನ್ ಮಾನಾ ತೊ ಲೈ ದಿಸಾಸಾಟಿ ಘರ್ ಸೊಡುನ್ ಧುರ್‍ಲ್ಯಾ ಗಾಂವಾಕ್ ಗೆಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:9
15 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ಅದೇನಂದರೆ - ಶ್ರೀಮಂತನಾದ ಒಬ್ಬಾನೊಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬರಬೇಕೆಂದು ದೂರದೇಶಕ್ಕೆ ಹೊರಟನು.


ದೇಶಾಂತರಕ್ಕೆ ಹೋಗುವ ಒಬ್ಬ ಮನುಷ್ಯನು ತನ್ನ ಆಳುಗಳನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವದು.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು.


ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು