Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:11 - ಕನ್ನಡ ಸತ್ಯವೇದವು J.V. (BSI)

11 ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಉತ್ಪಾತಗಳೂ ಆಕಾಶದಲ್ಲಿ ಮಹಾ ಸೂಚನೆಗಳೂ ತೋರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎಗ್ದಮ್ ಭಯಾನಕ್ ಭುಕಂಪ್ ಹೊತಾ, ಬರಗಾಲ್ ಪಡ್ತಾ, ಅನಿ ಸಗ್ಳ್ಯಾಕ್ಡೆ ಲೈ ತರಾಸ್ ಹೊತಲೊ ರೊಗ್‍ ಯೆವ್ಕ್ ಸುರು ಹೊತಾ. ಬಗಿನಸಲ್ಲಿ ಅನಿ ಭಯಾನಕ್ ಸಂಗ್ತಿಯಾ ಮಳ್ಬಾ ವರ್‍ತಿ ದಿಸುಕ್‍ ಲಾಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:11
8 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು;


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಬಿದ್ದುಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು