Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:16 - ಕನ್ನಡ ಸತ್ಯವೇದವು J.V. (BSI)

16 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ, ತುಮ್ಚೆ ಬಾಯ್-ಬಾಬಾ, ತುಮ್ಚಿ ಭಾವಾ, ತುಮ್ಚೆ ಸೊಯ್ರೆ, ಅನಿ ತುಮ್ಚಿ ದೊಸ್ತಾಚ್ ಧರುನ್ ದಿತ್ಯಾತ್, ಅನಿ ತುಮ್ಚ್ಯಾತ್ಲ್ಯಾ ಉಲ್ಲ್ಯಾತ್ನಿ ಜಿವಾನಿ ಮಾರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:16
14 ತಿಳಿವುಗಳ ಹೋಲಿಕೆ  

ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು, ಅತ್ತೆಗೆ ವಿರೋಧವಾಗಿ ಸೊಸೆಯು ಭೇದವುಳ್ಳವರಾಗಿರುವರು ಅಂದನು.


ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.


ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಇದಲ್ಲದೆ ಅಣ್ಣನು ತಮ್ಮನನ್ನು ತಂದೆಯು ಮಗನನ್ನು ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಇದಲ್ಲದೆ ಅಣ್ಣನು ತಮ್ಮನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಇದಲ್ಲದೆ ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು