Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:21 - ಕನ್ನಡ ಸತ್ಯವೇದವು J.V. (BSI)

21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ; ಪಟ್ಟಣದ ಮಧ್ಯದಲ್ಲಿರುವವರು ಹೊರಟು ಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಪಟ್ಟಣಕ್ಕೆ ಪ್ರವೇಶಿಸದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆ ಕೊನ್-ಕೊನ್ ಜುದೆಯಾತ್ ಹಾತ್ ತೆನಿ ಮಡ್ಡಿಯಾ ವೈನಿ ಪಳುನ್ ಜಾವ್ಚೆ; ಜೆ ಕೊನ್ ಶಾರಾತ್ ಭುತ್ತುರ್ ಹಾತ್ ತೆನಿ ಶಾರ್ ಸೊಡುನ್ ಪಳುಚೆ, ಅನಿ ಜೆ ಕೊನ್ ಖೆಡ್ಯಾತ್ನಿ ಹಾತ್, ತೆನಿ ಶಾರಾಚ್ಯಾ ಭುತ್ತುರ್ ಜಾಯ್‌ನಸ್ತಾನಾ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:21
13 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವದಕ್ಕೆ ಇಳಿಯದೆ ಒಳಕ್ಕೆ ಹೋಗದೆ


ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;


ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಅವನು [ಇಸ್ರಾಯೇಲ್ಯರ] ಸಮೂಹದವರಿಗೆ - ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು ಎಂದು ಹೇಳಿದನು.


ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂದಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.


ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.


ತನಗೆ ಬರಬೇಕಾದ ಸ್ವಾಸ್ತ್ಯವನ್ನು ಜನರ ಸಮಕ್ಷಮ ತೆಗೆದುಕೊಳ್ಳಲು ಯೆರೂಸಲೇವಿುನಿಂದ ಅಲ್ಲಿಗೆ ಹೊರಟು


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು