ಲೂಕ 21:34 - ಕನ್ನಡ ಸತ್ಯವೇದವು J.V. (BSI)34 ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 “ಉಶಾರ್ಕಿ ರ್‍ಹಾವಾ! ಸನಾ ಕರ್‍ತಲ್ಯಾತ್, ಅನಿ ನಿಶೆತ್, ಅನಿ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾತ್ನಿಚ್ ರ್‍ಹಾವ್ನಕಾಶಿ, ತೊ ದಿಸ್ ಎಗ್ದಮ್ ಅಚಾನಕ್ ತುಮ್ಚೆ ವರ್‍ತಿ ಯೆಯ್ಲ್. ಅಧ್ಯಾಯವನ್ನು ನೋಡಿ |