Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:36 - ಕನ್ನಡ ಸತ್ಯವೇದವು J.V. (BSI)

36 ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಉಶಾರ್ ರ್‍ಹಾವಾ, ಅನಿ , ಹೆ ಸಗ್ಳೆ ಘಡ್ತಾನಾ ತುಮ್ಕಾ ಹ್ಯಾತುರ್‍ನಾ ಹುರ್ವುನ್ ಘೆವ್‍ಸಾಟ್ನಿ, ಅನಿ ಮಾನ್ಸಾಚ್ಯಾ ಲೆಕಾಚ್ಯಾ ಇದ್ರಾಕ್ ಧೈರ್ಯಾನ್ ಇಬೆ ರಾವಸಾಟಿ ಮಾಗ್ನಿ ಕರುನ್ಗೆಗೆತ್ ರ್‍ಹಾವಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:36
34 ತಿಳಿವುಗಳ ಹೋಲಿಕೆ  

ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಆ ಕಾಲವು ಯಾವಾಗ ಬರುವದೋ ನಿಮಗೆ ಗೊತ್ತಿಲ್ಲವಾದ್ದರಿಂದ ನೋಡಿಕೊಳ್ಳಿರಿ, ಜಾಗರೂಕರಾಗಿರಿ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ನಾನು ನಿಮಗೆ ಹೇಳಿದ್ದನ್ನು ಎಲ್ಲರಿಗೂ ಹೇಳುತ್ತೇನೆ, ಎಚ್ಚರವಾಗಿರಿ ಅಂದನು.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ಆದದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲೂ ಪಾಪಾತ್ಮರು ನೀತಿವಂತರ ಸಭೆಯಲ್ಲೂ ನಿಲ್ಲುವದಿಲ್ಲ.


ಅವನು ಸರ್ವಶಕ್ತನಲ್ಲಿ ಆನಂದಪಟ್ಟು ಆತನನ್ನು ಸರ್ವದಾ ಪ್ರಾರ್ಥಿಸುವನೇ?


ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.


ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.


ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು.


ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.


ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೇವದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟವು.


ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು