Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:6 - ಕನ್ನಡ ಸತ್ಯವೇದವು J.V. (BSI)

6 ಆತನು - ನೀವು ಇವುಗಳನ್ನು ನೋಡುತ್ತೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿವಸಗಳು ಬರುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎಕ್ ಎಳ್ ಯೆತಾ, ಅನಿ ಹೆ ತುಮಿ ಬಗುಲ್ಯಾಸಿ ತೆ ಎಕ್ ಸೈತ್ ಗುಂಡೊ ಥೈ ನಸ್ತಾನಾ, ಸಗ್ಳೆ ಕೊಸ್ಳುನ್ ಘಾಲುನ್ ಹೊತಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:6
20 ತಿಳಿವುಗಳ ಹೋಲಿಕೆ  

ಯೇಸು - ಈ ದೊಡ್ಡ ಕಟ್ಟಣಗಳನ್ನು ನೋಡುತ್ತೀಯಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ; ಎಲ್ಲಾ ಕೆಡವಲ್ಪಡುವದು ಅಂದನು.


ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಇದರಿಂದ ನಮ್ಮ ಹೃದಯವು ಕುಂದಿದೆ, ಇದರಿಂದ ನಮ್ಮ ಕಣ್ಣು ಮೊಬ್ಬಾಗಿದೆ.


ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು.


ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!


ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ - ಈ ಆಲಯವು ಶಿಲೋವಿನ ಗತಿಗೆ ಬರುವದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವದು ಎಂದು ಏಕೆ ನುಡಿದೆ ಅಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಅವರು - ಬೋಧಕನೇ, ಅದು ಯಾವಾಗ ಆಗುವದು? ಅದು ಸಂಭವಿಸುವದಕ್ಕಿರುವಾಗ ಯಾವ ಸೂಚನೆ ತೋರುವದು ಎಂದು ಆತನನ್ನು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು