Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:8 - ಕನ್ನಡ ಸತ್ಯವೇದವು J.V. (BSI)

8 ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್ ತೆಂಕಾ “ಉಶಾರ್ಕಿನ್ ರ್‍ಹಾವಾ; ಮೊಸಾತ್ ಪಡ್ಸಿಲಾ, ಲೈ ಘೊಮನ್ಸಾ ಮಾಜ್ಯಾ ವಿಶಯಾತ್, ಬೊಲುಕ್ ಮನುನ್ ಯೆತ್ಯಾತ್, ಅನಿ ತೆನಿ ಮಿಯಾ ತೊ! ಅನಿ ಎಳ್ ಯೆವ್ನ್ ಪಾವ್ಲೊ ಅತ್ತಾ” ಮನುನ್ ಸಾಂಗ್ತ್ಯಾತ್, ಖರೆ, ತುಮಿ ತೆಂಚ್ಯಾ ಫಾಟ್ನಾ ಜಾವ್ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:8
26 ತಿಳಿವುಗಳ ಹೋಲಿಕೆ  

ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಬಹುಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡದಿರಿ;


ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.


ಜನರು ನಿಮಗೆ - ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ ಎಂದು ಹೇಳಿದರೆ ನೀವು ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಅವರು - ಬೋಧಕನೇ, ಅದು ಯಾವಾಗ ಆಗುವದು? ಅದು ಸಂಭವಿಸುವದಕ್ಕಿರುವಾಗ ಯಾವ ಸೂಚನೆ ತೋರುವದು ಎಂದು ಆತನನ್ನು ಕೇಳಲು


ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು