ಲೂಕ 21:9 - ಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಝಗ್ಡ್ಯಾಂಚ್ಯಾ ವಿಶಯಾತ್, ಹರ್‍ತಾಳಾಂಚ್ಯಾ ವಿಶಯಾತ್ ಆಯ್ಕುನ್ “ತುಮಿ ಭಿಂವ್ನಕಾಸಿ, ಹೆ ಸಗ್ಳೆ ಘಡುಕುಚ್ ಪಾಜೆ ತಸೆಮನುನ್ ಸರ್‍ತೊ ಕಾಲ್ ಜಗ್ಗೊಳ್ ಯೆಲಾ ಮನುಕ್ ಹೊಯ್ನಾ”, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |