Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:11 - ಕನ್ನಡ ಸತ್ಯವೇದವು J.V. (BSI)

11 ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ಭೋಜನ ಶಾಲೆ ಎಲ್ಲಿ ಎಂದು ನಿನ್ನನ್ನು ಕೇಳುತ್ತಾನೆ ಎಂಬದಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ಕೊಠಡಿ ಎಲ್ಲಿ, ಎಂದು ನಿಮ್ಮನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾರೆ,’ ಎನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ತ್ಯಾ ಘರ್‍ಚ್ಯಾ ವಡಿಲಾಕ್ “ಮಾಜಿ ಶಿಸಾ, ಅನಿ ಮಿಯಾ ಪಾಸ್ಕಾಚೆ ಜೆವಾನ್ ಜೆವ್ತಲಿ ಖೊಲಿ ಖೈ ಹಾಯ್? ಮನುನ್. ಗುರುಜಿನ್‍ ಇಚಾರ್ಲ್ಯಾನಾಯ್”, ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:11
9 ತಿಳಿವುಗಳ ಹೋಲಿಕೆ  

ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು - ಗುರುವು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ಅವರು - ಇದು ಸ್ವಾವಿುಯವರಿಗೆ ಬೇಕಾಗಿದೆ ಎಂದು ಹೇಳಿದರು.


ಯಾವನಾದರೂ ನಿಮ್ಮನ್ನು - ಯಾಕೆ ಬಿಚ್ಚುತ್ತೀರಿ ಎಂದು ಕೇಳಿದರೆ ಇದು ಸ್ವಾವಿುಯವರಿಗೆ ಬೇಕಾಗಿದೆ ಅನ್ನಿರಿ ಎಂದು ಹೇಳಿಕಳುಹಿಸಿದನು.


ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು


ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ಇವು ಸ್ವಾವಿುಯವರಿಗೆ ಬೇಕಾಗಿವೆ ಅನ್ನಿರಿ; ಕೂಡಲೆ ಅವುಗಳನ್ನು ಬಿಟ್ಟುಕೊಡುವನು ಎಂದು ಹೇಳಿ ಕಳುಹಿಸಿದನು.


ಅವನು ಯಾವ ಮನೆಗೆ ಹೋಗುವನೋ ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ತನಗೆ ಭೋಜನಶಾಲೆ ಎಲ್ಲಿ ಎಂದು ಕೇಳುತ್ತಾನೆ ಎಂಬದಾಗಿ ಹೇಳಿರಿ.


ಆತನು ಅವರಿಗೆ - ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ


ಅವನು ತಕ್ಕ ಸಾಮಾನಿಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ಸಿದ್ಧಮಾಡಿರಿ ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು