ಲೂಕ 22:12 - ಕನ್ನಡ ಸತ್ಯವೇದವು J.V. (BSI)12 ಅವನು ತಕ್ಕ ಸಾಮಾನಿಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ಸಿದ್ಧಮಾಡಿರಿ ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ಮೇಲ್ಮಾಳಿಗೆಯಲ್ಲಿ ವಿಶಾಲವಾದ ಹಾಗೂ ಸುಸಜ್ಜಿತವಾದ ಕೊಠಡಿಯೊಂದನ್ನು ತೋರಿಸುವನು. ಅಲ್ಲಿ ಸಿದ್ಧಮಾಡಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಈ ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ಕ್ರಮಪಡಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿಯೇ ಪಸ್ಕಭೋಜನ ಸಿದ್ಧಪಡಿಸಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೊ ತುಮ್ಕಾ ಮ್ಹಾಳ್ಗಿ ವರ್‍ತಿ ಎಕ್ ಸಗ್ಳೆ ತಯಾರ್ ಕರುನ್ ಥವಲ್ಲೆ ಖೊಲಿ ದಾಕ್ವುತಾ, ಥೈ ಸಗ್ಳೆ ತಯಾರ್ ಕರುನ್ ಥವಲ್ಲೆ ರ್‍ಹಾತಾ. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.