Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:30 - ಕನ್ನಡ ಸತ್ಯವೇದವು J.V. (BSI)

30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಮಿ ಮಾಜ್ಯಾ ರಾಜಾತ್ ಮಾಜ್ಯಾ ವಾಂಗ್ಡಾ ಜೆವ್ನಾಚ್ಯಾ ಮೆಜಾರ್ ಬಸ್ತ್ಯಾಶಿ, ಅನಿ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜಾಚ್ಯಾ ಕುರ್ಚಿರ್ ಬಸುನ್ ತುಮಿ ರಾಜ್ ಚಾಲ್ವುತ್ಯಾಶಿ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:30
16 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಇದಲ್ಲದೆ ನಿಮಗೆ ಹೇಳುವದೇನಂದರೆ ಮೂಡಣ ಪಡುವಣ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಎಂಬವರ ಸಂಗಡ ಊಟಕ್ಕೆ ಕೂಡ್ರುವರು;


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.


ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು