Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:36 - ಕನ್ನಡ ಸತ್ಯವೇದವು J.V. (BSI)

36 ಅದಕ್ಕೆ ಆತನು - ಈಗಲಾದರೋ ಹಮ್ಮೀಣಿಯಿದ್ದವನು ಅದನ್ನು ತಕ್ಕೊಳ್ಳಲಿ, ಹಸಿಬೆಯಿದ್ದವನು ಅದನ್ನು ತಕ್ಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಆದರೆ ಈಗ ಬುತ್ತಿಯಿರುವವನು ಅದನ್ನು ತೆಗೆದುಕೊಳ್ಳಲಿ; ಜೋಳಿಗೆಯಿರುವವನು ಹಾಗೆಯೇ ಮಾಡಲಿ; ಮತ್ತು ಕತ್ತಿಯಿಲ್ಲದವನು ತನ್ನ ಹೊದಿಕೆಯನ್ನು ಮಾರಿ ಒಂದನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜೆಜುನ್ ಖರೆ ಅತ್ತಾ, ಜೆ ಕೊನಾಕ್ಡೆ ಪೈಶಾಂಚಿ ಪಿಸ್ವಿ ನಾ ಹೊಲ್ಯಾರ್ ಕಾಯ್ಬಿ ಸಾಮಾನ್ ಘೆವ್ನ್ ಜಾತಲಿ ಪಿಸ್ವಿ ಹಾಯ್, ತೊ ತಿ ಘೆಂವ್ದಿ, ಅನಿ ಕೊನಾಕ್ಡೆ ಕೊಯ್ತೊ ನಾ, ತೊ ಅಪ್ನಾಚಿ ಅಂಗಿ ಇಕುನ್ ಎಕ್ ಕೊಯ್ತೊ ಇಕಾತ್ ಘೆಂವ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:36
10 ತಿಳಿವುಗಳ ಹೋಲಿಕೆ  

ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆ ಆಯಿತು, ನಿಮ್ಮ ಅನುಭವಕ್ಕೂ ಬಂತು.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.


ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.


ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.


ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ಅವರು - ಸ್ವಾಮೀ, ಇಗೋ ಇಲ್ಲಿ ಎರಡು ಕತ್ತಿಗಳಿವೆ ಅನ್ನಲು ಆತನು ಅವರಿಗೆ - ಅಷ್ಟು ಸಾಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು