Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:37 - ಕನ್ನಡ ಸತ್ಯವೇದವು J.V. (BSI)

37 ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಚೆ ಪುಸ್ತಕ್ “ತೆನಿ ಚೊರಾಂಚೆ ನಶಿಬ್ ಅಪ್ನಾ ವರ್‍ತಿ ಘೆಟ್ಲ್ಯಾನ್”. ಮನುನ್ ಸಾಂಗ್ತಾ ಹೆ, ಮಾಜ್ಯಾ ವಿಶಯಾತ್ ಸಾಂಗಲ್ಲೆ ಖರೆ ಹೊವ್ಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ, ಖರೆ ಹೊವ್ಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:37
17 ತಿಳಿವುಗಳ ಹೋಲಿಕೆ  

ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಆತನ ಸಂಗಡ ಕೊಲ್ಲುವದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ತೆಗೆದುಕೊಂಡು ಹೋದರು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.


ಮನುಷ್ಯಕುಮಾರನು ನೇಮಕವಾದ ಪ್ರಕಾರ ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು.


ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.


ಅದಕ್ಕೆ ಆತನು - ಈಗಲಾದರೋ ಹಮ್ಮೀಣಿಯಿದ್ದವನು ಅದನ್ನು ತಕ್ಕೊಳ್ಳಲಿ, ಹಸಿಬೆಯಿದ್ದವನು ಅದನ್ನು ತಕ್ಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.


ಬಳಿಕ ಯೇಸು ತನ್ನನ್ನು ಹಿಡಿಯುವದಕ್ಕೆ ಬಂದ ಮಹಾಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರಾ?


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು