ಲೂಕ 22:47 - ಕನ್ನಡ ಸತ್ಯವೇದವು J.V. (BSI)47 ಆತನು ಇನ್ನೂ ಮಾತಾಡುತ್ತಿರಲು ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬವನು ಆ ಜನರ ಮುಂದೆ ಮುಂದೆ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ ಜನರ ಗುಂಪೊಂದು ಕಾಣಿಸಿಕೊಂಡಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನು ಅವರಿಗೆ ಮುಂದಾಳಾಗಿ ಬಂದಿದ್ದನು. ಅವನು ಯೇಸುವಿಗೆ ಮುದ್ದಿಡಲು ಹತ್ತಿರ ಬಂದಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದ ಯೂದನು ಅವರಿಗೆ ಮುಂದಾಳಾಗಿ ಬಂದು, ಮುದ್ದಿಡುವುದಕ್ಕಾಗಿ ಯೇಸುವನ್ನು ಸಮೀಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಜೆಜು ಅಜುನ್ ಬೊಲುನ್ಗೆತುಚ್ ಹೊತ್ತೊ, ತನ್ನಾ ಎಕ್ ಲೊಕಾಂಚೊ ಮೊಟೊ ತಾಂಡೊಚ್ ಥೈ ಯೆಲೊ, ಬಾರಾ ಶಿಸಾನಿತ್ಲ್ಯಾ ಜುದಾಸಾನ್ ತೆಂಕಾ ಘೆವ್ನ್ ಯೆಲ್ಲ್ಯಾನ್. ತೊ ಉಪ್ಪಾ ದಿವ್ಕ್ ಮನುನ್ ಜೆಜುಕ್ಡೆ ಯೆಲೊ. ಅಧ್ಯಾಯವನ್ನು ನೋಡಿ |