Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:61 - ಕನ್ನಡ ಸತ್ಯವೇದವು J.V. (BSI)

61 ಸ್ವಾವಿುಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು - ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಸ್ವಾವಿು ನುಡಿದ ಮಾತನ್ನು ನೆನಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಆಗ ಪ್ರಭು ಯೇಸು ಹಿಂದಿರುಗಿ ಪೇತ್ರನನ್ನು ದಿಟ್ಟಿಸಿ ನೋಡಿದರು. “ಈ ದಿನ ಕೋಳಿ ಕೂಗುವ ಮೊದಲೇ, ‘ನಾನು ಆತನನ್ನು ಅರಿಯೆನು,’ ಎಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದು ಯೇಸು ನುಡಿದಿದ್ದ ಮಾತುಗಳು ಪೇತ್ರನ ನೆನಪಿಗೆ ಬಂದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

61 ತನ್ನಾ ಜೆಜು ಪರತ್ಲೊ, ಅನಿ ಸಿದಾ ಪೆದ್ರುಕ್ ಬಗಟ್ಲ್ಯಾನ್, ಅನಿ ಪೆದ್ರುಕ್, ಧನಿಯಾನ್ “ಆಜ್ ರಾಚ್ಚೆ ಕೊಂಬೊ ಭೊಕುಚ್ಯಾ ಅದ್ದಿ ತಿನ್ ದಾ ತಿಯಾ ಮಾಕಾ ವಳ್ಕಿಚ್‍ ನೈ, ಮನುನ್ ಸಾಂಗ್ತೆ” ಮನುನ್ ಸಾಂಗಟಲ್ಲ್ಯಾ ಗೊಸ್ಟಿಚಿ ಯಾದ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:61
19 ತಿಳಿವುಗಳ ಹೋಲಿಕೆ  

ಆತನು - ಪೇತ್ರನೇ, ನನ್ನ ವಿಷಯದಲ್ಲಿ - ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಯೇಸು - ನನಗಾಗಿ ಪ್ರಾಣ ಕೊಟ್ಟೀಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನ ವಿಷಯದಲ್ಲಿ ಅವನನ್ನು ಅರಿಯೆನೆಂದು ಮೂರು ಸಾರಿ ಹೇಳುವ ತನಕ ಕೋಳಿ ಕೂಗುವದೇ ಇಲ್ಲ ಅಂದನು.


ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ


ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿನಲ್ಲಿ ಹಿಂತಿರುಗಿ - ನನ್ನ ಉಡುಪನ್ನು ಯಾರು ಮುಟ್ಟಿದರು? ಎಂದು ಕೇಳಲು


ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ. ಇದೇ ರಾತ್ರಿಯಲ್ಲಿ ಕೋಳಿಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.


ಆದರೆ ಪೇತ್ರನು - ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.


ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು