Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:70 - ಕನ್ನಡ ಸತ್ಯವೇದವು J.V. (BSI)

70 ಆಗ ಎಲ್ಲರು - ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ - ನನ್ನನ್ನು ಅವನೇ ಎಂದು ನೀವೇ ಹೇಳುತ್ತೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

70 ತೆನಿ ಸಗ್ಳ್ಯಾನಿ“ತಸೆ ಜಾಲ್ಯಾರ್,ತಿಯಾ ದೆವಾಚೊ ಲೆಕ್ ಕಾಯ್?” ಮನುನ್ ಇಚಾರ್‍ಲ್ಯಾನಿ. ತೆನಿ ತೆಂಕಾ “ತುಮಿ ಸಾಂಗಲ್ಲೊಚ್ ಮಿಯಾ.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:70
20 ತಿಳಿವುಗಳ ಹೋಲಿಕೆ  

ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಹೇಳಲು


ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಲು ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು.


ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು. ಯೇಸು - ನೀನೇ ಹೇಳಿದ್ದೀ ಅಂದನು.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ನಾನು ಅದನ್ನು ನೋಡಿ ಈತನೇ ದೇವಕುಮಾರನೆಂದು ಸಾಕ್ಷಿಕೊಟ್ಟಿದ್ದೇನೆ ಅಂದನು.


ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.


ಆಗ ಆತನನ್ನು ಹಿಡುಕೊಡಬೆಕೆಂದಿದ್ದ ಯೂದನು - ಗುರುವೇ, ನಾನಲ್ಲವಲ್ಲ? ಅನ್ನಲಾಗಿ ಯೇಸು ಅವನಿಗೆ - ನೀನೇ ಹೇಳಿದ್ದೀ ಎಂದು ಹೇಳಿದನು.


ಅದಕ್ಕೆ ಅವರು - ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು