Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:10 - ಕನ್ನಡ ಸತ್ಯವೇದವು J.V. (BSI)

10 ಮಹಾಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಮೇಲೆ ಬಹು ಬಲವಾಗಿ ದೂರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮುಖ್ಯಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಮುಂದೆಬಂದು ಅವರ ಮೇಲೆ ಪ್ರಬಲವಾಗಿ ದೋಷಾರೋಪಣೆ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಹಾಯಾಜಕರು ಮತ್ತು ಧರ್ಮೋಪದೇಶಕರು ಅಲ್ಲಿ ನಿಂತುಕೊಂಡಿದ್ದರು. ಅವರು ಯೇಸುವಿಗೆ ವಿರುದ್ಧವಾಗಿ ಕೂಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮುಖ್ಯಯಾಜಕರೂ ನಿಯಮ ಬೋಧಕರು ನಿಂತುಕೊಂಡು ಬಲವಾಗಿ ಯೇಸುವಿನ ಮೇಲೆ ದೂರುಗಳನ್ನು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮುಖ್ಯ ಯಾಜಕಾ ಅನಿ ಖಾಯ್ದೊ ಶಿಕ್ವುತಲಿ ಲೊಕಾ ಫಿಡೆ ಯೆಲಿ, ಅನಿ ಜೆಜು ವರ್‍ತಿ, ಲೈ ಝುಟಿ ಅಪ್ವಾದಾ ತೆನಿ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:10
8 ತಿಳಿವುಗಳ ಹೋಲಿಕೆ  

ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ


ಮತ್ತು ಮಹಾಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನೂ ಉತ್ತರಕೊಡಲಿಲ್ಲ.


ಆದರೆ ಅವನು ಅನೇಕ ಮಾತುಗಳಿಂದ ಆತನನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು