Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:2 - ಕನ್ನಡ ಸತ್ಯವೇದವು J.V. (BSI)

2 ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಥೈ ತೆನಿ ಲೊಕಾಕ್ನಿ “ಸಿಜರಾಕ್ ತೆರ್‍ಗಿ ದಿವ್‍ನಕಾಶಿ, ಮನುನ್ ಚುಕ್ ಹೊತ್ತೆ ಶಿಕ್ವುತಲ್ಯಾ, ಅನಿ ಅಪ್ನಿ ಮೆಸ್ಸಿಯಾ ಅನಿ, ರಾಜಾ ಮನುನ್ ಮನ್ತಲ್ಯಾ ಎಕ್ ಮಾನ್ಸಾಕ್ ಅಮಿ ಧರುನ್ ಹಾನ್ಲಾಂವ್” ಮನುನ್ ಜೆಜು ವರ್‍ತಿ ಝುಟೊ ಅಪ್ಪಾದ್ ಘಾಲುಕ್‍ಲಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:2
33 ತಿಳಿವುಗಳ ಹೋಲಿಕೆ  

ಈ ಮಾತಿನ ದೆಸೆಯಿಂದ ಪಿಲಾತನು ಆತನನ್ನು ಬಿಡಿಸುವದಕ್ಕೆ ಪೇಚಾಡಿದನು. ಆದರೆ ಯೆಹೂದ್ಯರು - ನೀನು ಇವನನ್ನು ಬಿಡಿಸಿದರೆ ನೀನು ಕೈಸರನಿಗೆ ವಿುತ್ರನಲ್ಲ; ತನ್ನನ್ನು ಅರಸನಾಗಿ ಮಾಡಿಕೊಳ್ಳುವವನು ಕೈಸರನಿಗೆ ವಿರೋಧಿ ಎಂದು ಕೂಗಿ ಹೇಳಿದರು.


ಅವರಿಗೆ - ಈ ಮನುಷ್ಯನು ಪ್ರಜೆಗಳನ್ನು ತಿರುಗಿಬೀಳುವಂತೆ ಮಾಡುವವನು ಎಂದು ಇವನನ್ನು ನನ್ನ ಬಳಿಗೆ ತಂದಿರಲ್ಲಾ; ನೀವು ಇವನ ಮೇಲೆ ತಂದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆಮಾಡಿದರೂ ಇವನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಅವರು ಅವನಿಗೆ - ಇವನು ದುಷ್ಕರ್ಮಿಯಲ್ಲದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿದ್ದಿಲ್ಲವೆಂದು ಉತ್ತರ ಕೊಟ್ಟರು.


ಯೇಸು - ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. ಅವರು ಆತನ ವಿಷಯದಲ್ಲಿ ಬಹು ಆಶ್ಚರ್ಯಪಟ್ಟರು.


ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಅವನನ್ನು ಉನ್ನತಸ್ಥಾನದಿಂದ ದೊಬ್ಬುವದೇ ಅವರ ಆಲೋಚನೆ. ಸುಳ್ಳಾಡುವದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ.


ಇದಲ್ಲದೆ ಇವರು ಈಗ ನನ್ನ ಮೇಲೆ ಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.


ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.


ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;


ನ್ಯಾಯವಿರುದ್ಧಸಾಕ್ಷಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಅವನನ್ನು ಕಂಡ ಕೂಡಲೆ - ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು.


ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು. ಯೇಸು - ನೀನೇ ಹೇಳಿದ್ದೀ ಅಂದನು.


ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಲು ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು.


ಹೀಗಿರಲಾಗಿ ಪಿಲಾತನು ಹೊರಕ್ಕೆ ಅವರ ಬಳಿಗೆ ಬಂದು - ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದನು.


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು