ಲೂಕ 23:22 - ಕನ್ನಡ ಸತ್ಯವೇದವು J.V. (BSI)22 ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪಿಲಾತನು ಮೂರನೆಯ ಸಾರಿ ಅವರಿಗೆ, “ಏಕೆ? ಈತನು ಮಾಡಿದ ಅಪರಾಧವೇನು? ಈತನಲ್ಲಿ ಮರಣದಂಡನೆಗೆ ಕಾರಣವಾದದ್ದೇನೂ ನನಗೆ ಕಾಣಲಿಲ್ಲ. ಆದ್ದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಪಿಲಾತಾನ್ ತಿನ್ವೆಪಟಿ ತೆಂಕಾ “ಖರೆ, ಮರ್‍ನಾಚಿ ಶಿಕ್ಷಾ ದಿ ಸರ್ಕೆ ಕಸ್ಲಿ ಚುಕ್ ತೆನಿ ಕರ್‍ಲ್ಯಾನಾಯ್, ಮಾಕಾ ತರ್ ತೆಚಿ ಕಸ್ಲಿಬಿ ಚುಕ್ ಗಾವುಕ್ನಾ, ತಸೆ ಮನುನ್ ಮಿಯಾ ತೆಕಾ ಬಾರ್‍ಕೊಲಾನಿ ಮಾರುಕ್‍ಲಾವ್ತಾ, ಅನಿ ಸೊಡುನ್ ದಿತಾ!” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |