Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:25 - ಕನ್ನಡ ಸತ್ಯವೇದವು J.V. (BSI)

25 ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ಇಚಾರಲ್ಲ್ಯಾ ಡಂಗೊ ಉಟ್ವುನ್, ಅನಿ ಲೊಕಾಕ್ನಿ ಜಿವಾನಿ ಮಾರುನ್ ಬಂದಿಖಾನ್ಯಾತ್ ಹೊತ್ತ್ಯಾಕ್ ತೆನಿ ಸೊಡುನ್ ದಿಲ್ಯಾನ್, ಅನಿ ತುಮ್ಕಾ ಕಾಯ್ ಪಾಜೆ ತೆ ಕರಾ ಮನುನ್ ಜೆಜುಕ್ ತೆಂಚ್ಯಾ ತಾಬೆತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:25
12 ತಿಳಿವುಗಳ ಹೋಲಿಕೆ  

ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.


ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.


ಅದಕ್ಕೆ ಅವರು - ಇವನನ್ನು ಬೇಡ, ಬರಬ್ಬನನ್ನು ಬಿಟ್ಟುಕೊಡಬೇಕು ಎಂದು ತಿರಿಗಿ ಕೂಗಿ ಹೇಳಿದರು. ಈ ಬರಬ್ಬನು ಕಳ್ಳನಾಗಿದ್ದನು.


ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.


ಪಿಲಾತನು - ನೀವು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ


ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.


ಆಗ ಅವನು ಆತನನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರ ವಶಕ್ಕೆ ಕೊಟ್ಟನು.


ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು