ಲೂಕ 23:26 - ಕನ್ನಡ ಸತ್ಯವೇದವು J.V. (BSI)26 ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸೈನಿಕರು ಯೇಸುವನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆದ ಸೀಮೋನನೆಂಬವನನ್ನು ಹಿಡಿದು, ಅವನ ಮೇಲೆ ಶಿಲುಬೆಯನ್ನು ಹೊರಿಸಿ, ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಸೈನಿಕಾನಿ ಜೆಜುಕ್ ಘೆವ್ನ್ ಗೆಲ್ಯಾನಿ, ಅನಿ ತೆನಿ ಜೆಜುಕ್ ಘೆವ್ನ್ ಜಾತಾನಾ, ವಾಟೆರ್ ಸಿರೆನ್ ಮನ್ತಲ್ಯಾ ಗಾಂವಾಂಚ್ಯಾ ಸಿಮಾವಾಕ್ ತೆನಿ ಭೆಟ್ಲ್ಯಾನಿ. ತೊ ಶೆತಾತ್ನಾ ಅಪ್ನಾಚ್ಯಾ ಶಾರಾತ್ ಜಾಯ್. ತೆನಿ ತೆಕಾ ಧರ್‍ಲ್ಯಾನಿ, ಅನಿ ಜೆಜುಚೊ ಕುರಿಸ್ ವಾವುನ್ ಘೆವ್ನ್ ಜಾವ್ಕ್ ಲಾವ್ಲ್ಯಾನಿ. ಅಧ್ಯಾಯವನ್ನು ನೋಡಿ |