Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:4 - ಕನ್ನಡ ಸತ್ಯವೇದವು J.V. (BSI)

4 ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುವದಿಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಪಿಲಾತಾನ್ ಮುಖ್ಯ ಯಾಜಕಾಕ್ನಿ, ಅನಿ ತ್ಯಾ ಲೊಕಾಂಚ್ಯಾ ತಾಂಡ್ಯಾಕ್ “ಹ್ಯಾ ಮಾನ್ಸಾನ್ ಚುಕ್ ಕರ್‍ಲ್ಯಾನಾಯ್, ಮನುನ್ ದಾಕ್ವುತಲೆ ಕಾಯ್ ಕಾರನ್ ಮಾಕಾ ಗಾವುಕ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:4
13 ತಿಳಿವುಗಳ ಹೋಲಿಕೆ  

ಪಿಲಾತನು - ಸತ್ಯವಂದರೇನು? ಅಂದನು. ಇದನ್ನು ಹೇಳಿ ಪಿಲಾತನು ತಿರಿಗಿ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದು - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸುವದಿಲ್ಲ.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು.


ಪಿಲಾತನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು