Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:5 - ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತೆನಿ, “ಅನಿ ಜೊರಾನ್ ಸಗ್ಳ್ಯಾ ಜುದೆಯಾತ್ಲ್ಯಾ ಲೊಕಾಕ್ನಿ ಶಿಕ್ವುನ್ಗೆತ್, ಹ್ಯೊ ಲೊಕಾತ್ನಿ ಡಂಗೊ ಉಟ್ವುಲಾ, ತೆನಿ ಅಪ್ನಾಚೆ ಹೆ ಕಾಮ್ ಗಾಲಿಲಿಯಾತ್ನಾ ಚಾಲು ಕರಲ್ಲ್ಯಾನ್, ಅನಿ ಅತ್ತಾ ತೊ, ಹಿತ್ತೆ ಯೆವ್ನ್ ಪಾವ್ಲಾ” ಮನುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:5
24 ತಿಳಿವುಗಳ ಹೋಲಿಕೆ  

ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.


ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು -


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.


ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿತು.


ಆದರೆ ಅವರು ಮಹಾ ಶಬ್ದದಿಂದ ಕೂಗಿ ಕಿವಿಗಳನ್ನು ಮುಚ್ಚಿಕೊಂಡು ಒಟ್ಟಾಗಿ ಅವನ ಮೇಲೆ ಬಿದ್ದು


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು;


ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.


ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.


ಮತ್ತು ಕೆಲವರು - ಈತನು ಬರಬೇಕಾದ ಕ್ರಿಸ್ತನು ಅಂದರು.


ಆದರೆ ಅವರು ದೊಡ್ಡ ಕೂಗಾಟ ಮಾಡುತ್ತಾ - ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು; ಅವರ ಕೂಗಾಟವು ಗೆದ್ದಿತು.


ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ


ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -


ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರ್ನಿವಿುತ್ತವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡತೆಗೆದುಕೊಂಡರಲ್ಲಾ.


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.


ಇದನ್ನು ಪಿಲಾತನು ಕೇಳಿ - ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು