ಲೂಕ 23:50 - ಕನ್ನಡ ಸತ್ಯವೇದವು J.V. (BSI)50-51 ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950-51 ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50-51 ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50-51 ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50-51 ಜುದೆಯಾತ್ಲ್ಯಾ ಅರೆಮಾತಿಯಾ, ಮನ್ತಲ್ಯಾ ಗಾಂವಾತ್ಲೊ ಜುಜೆ ಮನ್ತಲೊ ಎಕ್ ಮಾನುಸ್ ಹೊತ್ತೊ. ತೊ ಎಕ್ ಬರೊ, ಅನಿ ಮರ್ಯಾದಿಚೊ ಮಾನುಸ್ ಹೊತ್ತೊ, ತೊ ದೆವಾಚೆ ರಾಜ್ ಯೆತಲಿ ವಾಟ್ ರಾಕುನ್ಗೆತ್ ಹೊತ್ತೊ. ಅನಿ ಜುದೆವಾಂಚ್ಯಾ ನ್ಯಾಯ್ ನಿರ್‍ನಯ್ ಕರ್‍ತಲ್ಯಾ ಬೈಟಕಿಚೊ ಮಾನುಸ್‌ಬಿ ಹೊತ್ತೊ. ತೆನಿ ಘೆಟಲ್ಲೊ ಹ್ಯೊ ನಿರ್‍ದಾರ್ ತೆಕಾ ಸಮಾ ದಿಸುಕ್ ನತ್ತೊ. ಅಧ್ಯಾಯವನ್ನು ನೋಡಿ |