ಲೂಕ 23:8 - ಕನ್ನಡ ಸತ್ಯವೇದವು J.V. (BSI)8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು; ಯಾಕಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವದಾದರೂ ಒಂದು ಸೂಚಕಕಾರ್ಯವಾಗುವದನ್ನು ನೋಡಬೇಕೆಂದು ನಿರೀಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೆರೋದನು ಯೇಸುವನ್ನು ಕಂಡಾಗ, ಅತ್ಯಂತ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ, ಅವರನ್ನು ಕಾಣಲು ಬಹಳ ಕಾಲದಿಂದ ಆಶೆಪಟ್ಟಿದ್ದನು. ಅವರಿಂದಾಗುವ ಸೂಚಕಕಾರ್ಯವನ್ನು ಕಾಣಲು ನಿರೀಕ್ಷಿಸುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೆಜುಕ್ ಬಗುನ್ ಹೆರೊದಾಕ್ ಲೈ ಕುಶಿ ಹೊಲಿ, ಕಶ್ಯಾಕ್ ಮಟ್ಲ್ಯಾರ್ ಲೈಂದಾ, ತೆನಿ ಜೆಜುಚ್ಯಾ ವಿಶಯಾತ್ ಆಯ್ಕಲ್ಲ್ಯಾನ್, ಅನಿ ಜೆಜುಕ್ ಭೆಟುಚೆ ಮನುನ್ ತೆಕಾ ಲೈ ಮನ್ ಹೊತ್ತೊ. ಜೆಜುನ್ ಕಸ್ಲೆ ತರ್ ಮೊಟೆ ವಿಚಿತ್ರ್ ಕಾಮ್ ಕರಲ್ಲೆ ತೆಕಾ ಬಗ್ತಲೊ ಮನ್ ಹೊತ್ತೊ. ಅಧ್ಯಾಯವನ್ನು ನೋಡಿ |