Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:21 - ಕನ್ನಡ ಸತ್ಯವೇದವು J.V. (BSI)

21 ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಈ ಹೊತ್ತು ಮೂರನೆಯ ದಿನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ ಅಮಿ ಹ್ಯೊ ಇಸ್ರಾಯೆಲಾಕ್ ಸ್ವತಂತ್ರ್ ಹಾನುನ್ ದಿತಲೊ ಎಕ್ಲೊ ಮನುನ್ ಯವಜಲ್ಲ್ಯಾವ್. ಹೆ ಸಗ್ಳೆ ಹೊವ್ನ್ ಆಜ್ ತಿನ್ವೊ ದಿಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:21
8 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.


ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇವಿುನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಕೂಡಿ ಬಂದವರು ಆತನನ್ನು - ಸ್ವಾಮೀ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ತಿರಿಗಿ ಸ್ಥಾಪಿಸಿಕೊಡುವಿಯೋ ಎಂದು ಕೇಳಲು


ಆತನೇ ಇಸ್ರಾಯೇಲನ್ನು ಅದರ ಸಕಲಪಾಪಗಳಿಂದ ವಿಮೋಚಿಸುವನು.


ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಅವನನ್ನು ನೂಕಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು