Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:44 - ಕನ್ನಡ ಸತ್ಯವೇದವು J.V. (BSI)

44 ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಮಾನಾ ತೆನಿ, “ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾಚ್ ಮೊಯ್ಜೆಚ್ಯಾ ಪುಸ್ತಾಕಾತ್ನಿ, ಪ್ರವಾದ್ಯಾನಿ ಲಿವಲ್ಲ್ಯಾ ಪುಸ್ತಾಕಾತ್ನಿ, ಅನಿ ಕಿರ್ತನಾತ್ನಿ ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ ಖರೆ ಹೊವ್ಕ್ ಪಾಜೆ ಮನುನ್ ಹೆ ಸಗ್ಳೆ ತುಮ್ಕಾ ಸಾಂಗಟಲ್ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:44
88 ತಿಳಿವುಗಳ ಹೋಲಿಕೆ  

ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.


ಅವನು ನನ್ನ ವಿಷಯವಾಗಿ ಬರೆದನು; ಆದದರಿಂದ ನೀವು ಮೋಶೆಯ ಮಾತನ್ನು ನಂಬುವವರಾಗಿದ್ದರೆ ನನ್ನ ಮಾತನ್ನೂ ನಂಬುತ್ತಿದ್ದಿರಿ.


ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿಕೋಮಲವಾದದ್ದನ್ನು ಚಿವುಟಿ ಉನ್ನತೋನ್ನವಾದ ಪರ್ವತದ ಮೇಲೆ ನಾಟುವೆನು;


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರಿಗಿ ಸೇರಿಸಬೇಕು. ಪಟ್ಟಾಭಿಷೇಕಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ


ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ -


ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;


ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ಯಾಕಂದರೆ ಬರೆದಿರುವದೆಲ್ಲಾ ನೆರವೇರುವದಕ್ಕಾಗಿ ಅವು ದಂಡನೆಯ ದಿವಸಗಳಾಗಿವೆ.


ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಕಳುಹಿಸಿಕೊಟ್ಟರೆ ನನಗೆ ಇಂಥಿಂಥದು ಆಗಬೇಕೆಂಬುವ ಶಾಸ್ತ್ರದ ಮಾತುಗಕು ನೆರವೇರುವದು ಹೇಗೆ ಎಂದು ಹೇಳಿದನು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಆದರೆ ದೇವರು ತಾನು ನೇವಿುಸಿದ ಕ್ರಿಸ್ತನು ಬಾಧೆಯನ್ನನುಭವಿಸಿ ಸಾಯಬೇಕೆಂಬದಾಗಿ ಎಲ್ಲಾ ಪ್ರವಾದಿಗಳ ಬಾಯಿಂದ ಮುಂಚಿತವಾಗಿ ಹೇಳಿಸಿದ ಮಾತನ್ನು ಹೀಗೆ ನೆರವೇರಿಸಿದನು.


ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.


ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನಂದರೆ -


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.


ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಅದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು