Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:47 - ಕನ್ನಡ ಸತ್ಯವೇದವು J.V. (BSI)

47 ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47-48 ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಅನಿ ತೆಚ್ಯಾ ನಾವಾನ್ ಸಗ್ಳ್ಯಾ ದೆಶಾಕ್ನಿ ಪಾಪಾಚೆ ಜಿವನ್ ಬದ್ಲುಕ್,ಅನಿ ಪಾಪಾಂಚಿ ಮಾಪಿ ಗಳ್ಸುನ್ ಘೆವ್ಕ್, ಬರಿ ಖಬರ್ ಸಾಂಗುಕ್ ಪಾಜೆ, ಹೆ ಕಾಮ್ ಜೆರುಜಲೆಮಾತ್ನಾ ಚಾಲು ಹೊತಾ.”ಮನುನ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:47
52 ತಿಳಿವುಗಳ ಹೋಲಿಕೆ  

ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು?


ಆತನು ನಮ್ಮನ್ನು ಆಶೀರ್ವದಿಸುವನು. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು